Chikkaballapur : ಚಿಕ್ಕಬಳ್ಳಾಪುರ ನಗರದ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ, ವಕೀಲರ ಸಂಘದ ಆಶ್ರಯ ದಲ್ಲಿ ಬುಧವಾರ ‘ಮಹಿಳೆಯರಿಗೆ ಲೈಂಗಿಕ ಕಿರುಕುಳ ನಿಯಂತ್ರಣ’ (The Sexual Harassment of Women at work place prevention) ಕುರಿತ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ನೇರಳೆ ವೀರಭದ್ರಯ್ಯ ಭವಾನಿ “ಉದ್ಯೋಗ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ನಿಯಂತ್ರಣ (2013) ಕಾಯ್ದೆ ಅನುಸಾರ ಹತ್ತು ಮಹಿಳೆಯರು ಕೆಲಸ ಮಾಡುವ ಸ್ಥಳಗಳಲ್ಲಿ, ಅವರಿಗೆ ಆಗಬಹುದಾದ ದೌರ್ಜನ್ಯದ ಬಗ್ಗೆ ದೂರು ನೀಡಲು ಸಮಿತಿ ರಚಿಸಿ ಜಾಗೃತಿ ಮೂಡಿಸುವ ಕಾರ್ಯವನ್ನು ನ್ಯಾಯಾಲಯದಿಂದ ಆರಂಭಿಸಿದ್ದೇವೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಇತರ ಸರ್ಕಾರಿ, ಖಾಸಗಿ ಸಂಸ್ಥೆಗಳು ಮತ್ತು ಕೈಗಾರಿಕೆಗಳಲ್ಲಿ ಕಾನೂನು ಸೇವೆಗಳ ಪ್ರಾಧಿಕಾರದಿಂದ ಜಾಗೃತಿ ಮೂಡಿಸಲಾಗುವುದು” ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರಾದ ಎನ್. ಸವಿತಾ ಕುಮಾರಿ, ಸಂಪನ್ಮೂಲ ವ್ಯಕ್ತಿ ರುಕ್ಮಿಣಿ, ನ್ಯಾಯಾಧೀಶರಾದ ಶಿವಪ್ರಸಾದ್, ಬಾಳಪ್ಪ ಜರುಗು, ಸಿ.ವಿ.ಸನತ್ ಕುಮಾರ್, ವಿವೇಕಾನಂದ ಪಂಡಿತ್, ಲಕ್ಷ್ಮಿಕಾಂತ್ ಜೆ.ಮಿಸ್ಕಿನ್, ಎ.ಅರುಣಾ ಕುಮಾರಿ, ಮಹಮ್ಮದ್ ರೋಷನ್, ಮಾನಸ ಶೇಖರ್, ಶ್ರುತಿ, ಲಾವಣ್ಯ ಮತ್ತಿತರರು ಉಪಸ್ಥಿತರಿದ್ದರು.