Chikkaballapur : ಸ್ವಾತಂತ್ರ್ಯ ಅಮೃತ ಮಹೋತ್ಸವದ (Azadi Ka Amrit Mahotsav) ಅಂಗವಾಗಿ ಚಿಕ್ಕಬಳ್ಳಾಪುರ ನಗರದಲ್ಲಿ ತಿರಂಗ ಯಾತ್ರೆ (Tiranga Yatra) ಹಮ್ಮಿಕೊಳ್ಳಲಾಗಿದ್ದು ಮಂಗಳವಾರ ಈ ಕುರಿತು ಪೂರ್ವಭಾವಿ ಸಭೆ ನಡೆಯಿತ್ತು.
ಸಭೆಯಲ್ಲಿ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (Dr K Sudhakar) “ಸಾಮಾನ್ಯವಾಗಿ ಪ್ರತಿ ವರ್ಷ August 15 ರಂದು ಸ್ವಾತಂತ್ರ್ಯ ದಿನವನ್ನು (Independence Day) ಆಚರಿಸುತ್ತಿದ್ದೆವು, ಆದರೆ ಈ ಬಾರಿ ಮೂರು ದಿನ ಸ್ವಾತಂತ್ರ್ಯ ದಿನವನ್ನು ಆಚರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕರೆ ನೀಡಿದ ಹಿನ್ನಲೆಯಲ್ಲಿ August 12 ರಂದು ಬೆಳಿಗ್ಗೆ 7ಕ್ಕೆ ನಗರದ MG ರಸ್ತೆಯ ಜೈಭೀಮ್ ಹಾಸ್ಟೆಲ್ (Jai Bheem Hostel) ಬಳಿಯಿಂದ ತಿರಂಗ ಯಾತ್ರೆಗೆ ಚಾಲನೆ ನೀಡಲಾಗುವುದು. ಸುಮಾರು ಒಂದು ಕಿ.ಮೀ ಉದ್ದದ ತ್ರಿವರ್ಣ ಧ್ವಜವನ್ನು ಮುಖಂಡರು ಈಗಾಗಲೇ ಸಿದ್ಧಗೊಳಿಸಿದ್ದು ಆ ಧ್ವಜವನ್ನು ಹಿಡಿದು ನಗರದಲ್ಲಿ 5 ಕಿ.ಮೀ ಪಾದಯಾತ್ರೆ ಮಾಡೋಣ” ಎಂದು ಹೇಳಿದರು.
ಸಭೆಯಲ್ಲಿ ನಗರಸಭೆ ಅಧ್ಯಕ್ಷ ಡಿ.ಎಸ್.ಆನಂದರೆಡ್ಡಿ ಬಾಬು, BJP ಜಿಲ್ಲಾ ಘಟಕದ ಅಧ್ಯಕ್ಷ ರಾಮಲಿಂಗಪ್ಪ, ಪ್ರಧಾನ ಕಾರ್ಯದರ್ಶಿ ಮರಳುಕುಂಟೆ ಕೃಷ್ಣಮೂರ್ತಿ, ನಗರ ಘಟಕದ ಅಧ್ಯಕ್ಷ ಆನಂದ್, ಮಂಚನಬಲೆ ಗ್ರಾ.ಪಂ ಉಪಾಧ್ಯಕ್ಷ ಶ್ರೀಧರ್, ನಗರಸಭೆ ಸದಸ್ಯರು ಹಾಗೂ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.