Bagepalli : ಬಾಗೇಪಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಸಂಚಾರ ನಿಯಮ (Traffic Rules)ಗಳ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳಲಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ಪೊಲೀಸ್ ಇನ್‌ಸ್ಪೆಕ್ಟರ್ ಡಿ.ಆರ್.ನಾಗರಾಜ್ ” ಯುವ ಪೀಳಿಗೆ ದುಶ್ಚಟಗಳಿಂದ ದೂರ ಇರಬೇಕು. ಸಮಾಜದಲ್ಲಿ ನಡೆಯುತ್ತಿರುವ ಕೆಲ ಅನೈತಿಕ ಹಾಗೂ ಸಾಮಾಜಘಾತಕ ಚಟುವಟಿಕೆಗಳನ್ನು ತಡೆಗಟ್ಟಲು ಸಾರ್ವಜನಿಕರ ಸಹಕಾರ ಅಗತ್ಯ, ಯಾವುದೇ ರೀತಿಯಾದ ಸಮಾಜಘಾತಕ ಚಟುವಟಿಕೆಗಳು ಕಂಡುಬಂದರೆ ಸಾರ್ವಜನಿಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಬೇಕು, ಆಗ ಮುಂದಾಗುವ ಅನಾಹುತಗಳನ್ನು ತಡೆಯಬಹುದು ” ಎಂದು ಹೇಳಿದರು.
ವಾಹನ ಚಲಾವಣೆ ಮಾಡುವಾಗ ಜಾಗರೂಕತೆಯಿಂದ ಇರಬೇಕು, ಆಕಸ್ಮಿಕ ದುರ್ಘಟನೆಗಳನ್ನು ತಪ್ಪಿಸಲು ಸಂಚಾರ ನಿಯಮಗಳನ್ನು ಪಾಲಿಸಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ವೈ.ನಾರಾಯಣ ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಕೆ.ಎಂ.ನಯಾಜ್ ಅಹಮದ್, ಪ್ರಾಧ್ಯಾಪಕ ಡಾ.ಬಿ.ಎನ್.ಪ್ರಭಾಕರ್, ಗ್ರಂಥಪಾಲಕ ಡಾ.ಸಿ.ಎಸ್.ವೆಂಕಟರಾಮರೆಡ್ಡಿ, ಎಲ್.ಶ್ರೀನಿವಾಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur