Chikkaballapur : ಸಾವಿರಾರು ವಿದ್ಯಾರ್ಥಿಗಳು, ಸರ್ಕಾರಿ ಅಧಿಕಾರಿಗಳು, ಸರ್ಕಾರೇತರ ಸಂಘಟನೆಗಳ ಪದಾಧಿಕಾರಿಗಳು, ಮಹಿಳೆಯರು, ಜನಪ್ರತಿನಿಧಿಗಳು ಚಿಕ್ಕಬಳ್ಳಾಪುರ ನಗರದ BB ರಸ್ತೆಯಲ್ಲಿ ‘ಭಾರತ್ ಮಾತಾಕಿ ಜೈ’, ‘ವಂದೇ ಮಾತರಂ’ ಎಂದು ಘೋಷಣೆ ಕೂಗುತ್ತಾ ಒಂದು ಕಿಲೋಮೀಟರ್ ಉದ್ದದ ಬೃಹತ್ ತ್ರಿವರ್ಣ ಧ್ವಜ (Indian National Flag) ಹಿಡಿದು ಸಾಗಿದರು.
ಜಿಲ್ಲಾಡಳಿತ ಸ್ವಾತಂತ್ರ್ಯ ಅಮೃತ ಮಹೋತ್ಸವ (Azadi ka Amrut Mohotsav) ದ ಅಂಗವಾಗಿ ಮನೆ ಮನೆಗೆ ತಿರಂಗಾ ಅಭಿಯಾನದ (Har Ghar Tiranga) ಪ್ರಯುಕ್ತ ನಗರದ ಜೈ ಭೀಮ್ ಹಾಸ್ಟೆಲ್‌ನಿಂದ ನಂದಿ ರಂಗಮಂದಿರದವರೆಗೆ ಹಮ್ಮಿಕೊಂಡಿದ್ದ ತ್ರಿವರ್ಣ ನಡಿಗೆ (Trivarna Nadige) ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (K Sudhakar) “ಧೈರ್ಯ, ಶಾಂತಿ ಮತ್ತು ಫಲವತ್ತತೆಯ ಪ್ರತೀಕವಾದ ನಮ್ಮ ತ್ರಿವರ್ಣ ಧ್ವಜವನ್ನು ಮನೆಮನೆಯಲ್ಲೂ ಹಾರಿಸುವ ಹರ್ ಘರ್ ತಿರಂಗ ಅಭಿಯಾನದ ಮೂಲಕ ರಾಷ್ಟ್ರಪ್ರೇಮ, ರಾಷ್ಟ್ರಾಭಿಮಾನ ಹೆಚ್ಚುತ್ತದೆ” ಎಂದು ಹೇಳಿದರು.
ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಕೆ.ವಿ. ನಾಗರಾಜ್, ನಗರಸಭೆ ಅಧ್ಯಕ್ಷ ಆನಂದ್ ರೆಡ್ಡಿ ಬಾಬು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹರೀಶ್, ನಗರಸಭೆ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.