Chikkaballapur : ಚಿಕ್ಕಬಳ್ಳಾಪುರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಾಲ್ಮೀಕಿ ಜಯಂತಿ (Valmiki Jayanthi) ಅಂಗವಾಗಿ ಸೋಮವಾರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ನೇತೃತ್ವದಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯನ್ನು (preparatory Meeting)ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ “ಚಿಕ್ಕಬಳ್ಳಾಪುರ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ October 17 ರಂದು ಜಿಲ್ಲಾ ಮಟ್ಟದ ಮಹರ್ಷಿ ವಾಲ್ಮೀಕಿ ಅವರ ಜಯಂತಿ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲಾಗುವುದು. ವಾಪಸಂದ್ರದ ರಂಗನಾಥ ಸ್ವಾಮಿ ದೇವಾಲಯದಿಂದ ಪಲ್ಲಕ್ಕಿ ಮತ್ತು ಸ್ತಬ್ದ ಚಿತ್ರಗಳ ಮೆರವಣಿಗೆ ಆರಂಭವಾಗಿ ಬಿ.ಬಿ ರಸ್ತೆ ಮೂಲಕ ಒಕ್ಕಲಿಗರ ಕಲ್ಯಾಣ ಮಂಟಪ ತಲುಪಲಿದೆ. ಮಹರ್ಷಿ ವಾಲ್ಮೀಕಿ ಅವರ ವಿಚಾರಧಾರೆಗಳ ಕುರಿತು ಭಾಷಣ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿರುವ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿವಿಧ ಕ್ಷೇತ್ರಗಳ ಸಮುದಾಯದ ಸಾಧಕರಿಗೆ ಸನ್ಮಾನ ನಡೆಯಲಿದೆ” ಎಂದು ತಿಳಿಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ಭಾಸ್ಕರ್, ಡಿವೈಎಸ್‌ಪಿ ಶಿವಕುಮಾರ್, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಈಶ್ವರಪ್ಪ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರವೀಣ್ ಪಾಟೀಲ್, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶೇಷಾದ್ರಿ, ಜಿಲ್ಲಾ ಜಾಗೃತಿ ಸಮಿತಿ ಜಿಲ್ಲಾಧ್ಯಕ್ಷ ಸುಬ್ಬರಾಯಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗವಿರಾಯಪ್ಪ, ಕಾರ್ಯಾಧ್ಯಕ್ಷ ಕೆ.ಟಿ ನಾರಾಯಣಸ್ವಾಮಿ, ಕೆ. ಆವಲಕೊಂಡರಾಯಪ್ಪ ಹಾಗೂ ಮುಖಂಡರು ಪಾಲ್ಗೊಂಡಿದ್ದರು.