Gudibande : ಗುಡಿಬಂಡೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸೋಮವಾರ ನಡೆದ ವಾಲ್ಮೀಕಿ ಜಯಂತಿ (Valmiki Jayanti) ಪೂರ್ವಭಾವಿ ಸಭೆಯನ್ನು (Preliminary Meeting) ವಾಲ್ಮೀಕಿ ಸಮುದಾಯದ ಮುಖಂಡರು ಬಹಿಷ್ಕಾರ (Boycott) ಮಾಡಿ ತಾಲ್ಲೂಕು ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತಾನಾಡಿದ ತಾಲ್ಲೂಕು ವಾಲ್ಮೀಕಿ ಸಮುದಾಯದ ಅಧ್ಯಕ್ಷ ಗಂಗಾಧರ್ “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರಿಗೆ ರುದ್ರಭೂಮಿ, ವಾಲ್ಮೀಕಿ ಸಮುದಾಯ ಭವನ ನಿರ್ಮಾಣದಲ್ಲಿ ನಿರ್ಲಕ್ಷ್ಯ ತೋರಲಾಗುತ್ತಿದೆ. ಹೀಗಾಗಿ ಈ ಬಾರಿ ಸರ್ಕಾರ ಆಯೋಜನೆ ಮಾಡುವ ಜಯಂತಿಯಲ್ಲಿ ಭಾಗವಹಿಸುವುದಿಲ್ಲ. ಕಪ್ಪುಪಟ್ಟಿ ಪ್ರದರ್ಶಿಸಿ ಮೌನ ಪ್ರತಿಭಟನೆ ನಡೆಸಲು ತೀರ್ಮಾನ ಮಾಡಲಾಗಿದೆ” ಎಂದು ತಿಳಿಸಿದರು.
ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಮನೀಷ್, ಇಒ ಹೇಮಾವತಿ, ಸಮಾಜ ಕಲ್ಯಾಣ ಅಧಿಕಾರಿ ಜಯಣ್ಣ, ಮುಖ್ಯಾಧಿಕಾರಿ ಶ್ರೀನಿವಾಸ್, ತಾಲ್ಲೂಕು ವಾಲ್ಮೀಕಿ ಸಂಘದ ಅಧ್ಯಕ್ಷ ಗಂಗಾಧರ್, ನೌಕರರ ಸಂಘದ ಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ ಇದ್ದರು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur