Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗಳಿಗೆ ನೇರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಸಿದ್ದತಾ ಸಭೆಯನ್ನು (Preparatory Meeting) ನಡೆಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ “September 29 ಹಾಗೂ October 27 ರಂದು ಚಿಕ್ಕಬಳ್ಳಾಪುರದ 17 ಮತ್ತು ಗೌರಿಬಿದನೂರಿನ 4 ಸೇರಿದಂತೆ ಜಿಲ್ಲೆಯ 21 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು ಯಾವುದೇ ಲೋಪದೋಷವಾಗದಂತೆ ಸುಮಗವಾಗಿ ಮತ್ತು ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕು ಎಂದು ನೇಮಿಸಲ್ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಒಟ್ಟು 10,053 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಅಂಗವಿಕಲರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು. ಪರೀಕ್ಷೆ ನಡೆಯುವ ಕೊಠಡಿಗಳಲ್ಲಿಸಿ.ಸಿ ಟಿ.ವಿ ಕ್ಯಾಮೆರಾ, ವಿದ್ಯುತ್ ಸಂಪರ್ಕ, ಡೆಸ್ಕ್‌ಗಳು, ಬೆಳಕು, ಕುಡಿಯುವ ನೀರು, ಸ್ವಚ್ಛತೆ, ಗಾಳಿ ವ್ಯವಸ್ಥೆ, ಶೌಚಾಲಯ, ಸುಸ್ಥಿಯಲ್ಲಿರುವ ಗಡಿಯಾರ ಸೇರಿದಂತೆ ಮೂಲ ಸೌಕರ್ಯಗಳ ವ್ಯವಸ್ಥೆ ಆಗಬೇಕು” ಎಂದು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಖಜಾನೆಯ ಉಪನಿರ್ದೇಶಕ ಮಂಜುನಾಥ್, ಚಿಕ್ಕಬಳ್ಳಾಪುರ ಮತ್ತು ಗೌರಿಬಿದನೂರು ಪರೀಕ್ಷಾ ಕೇಂದ್ರಗಳ ಸಂಬಂಧಿಸಿದ ಶಾಲಾ, ಕಾಲೇಜುಗಳ ಪ್ರಾಂಶುಪಾಲರು, ಶಿಕ್ಷಕರು ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಸಭೆಯಲ್ಲಿ ಪಾಲ್ಗೊಂಡಿದ್ದರು.