Chikkaballapur : ಚಿಕ್ಕಬಳ್ಳಾಪುರ ಹೊರವಲಯದ ಆದಿಚುಂಚನಗಿರಿ (Adichunchanagiri) ಶಾಖಾ ಮಠದ ಆವರಣದಲ್ಲಿರುವ ವೀರಾಂಜನೇಯ ಸ್ವಾಮಿ ರಥೋತ್ಸವ (Veeranjameya Swamy Rathotsava) ಮತ್ತು ಕಡಲೆಕಾಯಿ ಪರಿಷೆ (Kadalaekayi Parishe) ಭಾನುವಾರ ಭಕ್ತಿಪೂರ್ವಕವಾಗಿ ನಡೆಯಿತು.
ರಥೋತ್ಸವದ ಅಂಗವಾಗಿ ದೇವಾಲಯಲ್ಲಿನ ದೇವರ ಮೂರ್ತಿಗಳಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಮುಂಜಾನೆಯಿಂದಲೇ ಅಭಿಷೇಕ, ಹೋಮ, ಮಹಾಮಂಗಳಾರತಿ ಒಳಗೊಂಡಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ನೆರವೇರಿದವು.
ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಚಿಕ್ಕಬಳ್ಳಾಪುರ ಶಾಖಾಮಠದ ಮಂಗಳನಂದನಾಥ ಸ್ವಾಮೀಜಿ ಮೂರ್ತಿಗೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ಇದೇ ವೇಳೆ ನಡೆದ ಕಡಲೆ ಕಾಯಿ ಪರಿಷೆಯಲ್ಲಿ ಪ್ರಸಾದವನ್ನು ಭಕ್ತರಿಗೆ ಹಂಚಲಾಯಿತು.