Chikkaballapur : ವೀರಶೈವ ಲಿಂಗಾಯತರನ್ನು (Veerashaiva Lingayat Community) ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಪಟ್ಟಿಗೆ (OBC) ಸೇರಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ವೀರಶೈವ ಮಹಾಸಭಾ (Veerashaiva Mahasabha) ಜಿಲ್ಲಾ ಘಟಕದಿಂದ ಚಿಕ್ಕಬಳ್ಳಾಪುರ ನಗರದಲ್ಲಿ ಸೋಮವಾರ ಪ್ರತಿಭಟನಾ (Protest) ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.
ವೀರಶೈವ ಮಹಾಸಭಾ ಸದಸ್ಯರು ಹಾಗೂ ವೀರಶೈವ ಲಿಂಗಾಯತ ಸಮಾಜದವರು ಜಿಲ್ಲಾ ಗ್ರಂಥಾಲಯದ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ರ‍್ಯಾಲಿಯನ್ನು ನಡೆಸಿದರು.
ವೀರಶೈವ ಲಿಂಗಾಯಿತ ಸಮುದಾಯವು ರಾಜ್ಯದಲ್ಲಿ ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿದೆ. ಆದರೆ ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಲ್ಲ. ಇದರಿಂದ ಕೇಂದ್ರ ಸರ್ಕಾರದ ನೌಕರಿಗಳಲ್ಲಿ ಮತ್ತು ಶಿಕ್ಷಣದ ವಿಚಾರವಾಗಿ ಸಮುದಾಯದವರಿಗೆ ಅನ್ಯಾಯವಾಗುತ್ತಿದೆ. ಆದ್ದರಿಂದ ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ವೀರಶೈವ ಲಿಂಗಾಯತ ಸಮುದಾಯವನ್ನು ಸೇರಿಸಬೇಕು ಎಂದು ಒತ್ತಾಯಿಸಿದರು ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮಹಾಸಭಾ ಜಿಲ್ಲಾ ಅಧ್ಯಕ್ಷ ಎಸ್.ಭಾಸ್ಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಎಚ್.ಶಿವಕುಮಾರ್, ಖಜಾಂಚಿ ಮಲ್ಲಿಕಾರ್ಜುನ್, ರಾಜೇಂದ್ರ ಬಾಬು, ತಿಪ್ಪೇಶ್, ವಿಜಯ, ಹೇಮಾ, ವಿನೋದ್, ಅರಣ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.