Chikkaballapur : ಚಿಕ್ಕಬಳ್ಳಾಪುರ ನಗರದಲ್ಲಿ ಸೋಮವಾರ ವಿಧಾನಪರಿಷತ್ ಆಗ್ನೇಯ ಶಿಕ್ಷಕರ ಕ್ಷೇತ್ರದ (Vidhana Parishath South East Teachers Constituency) ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಪರವಾಗಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಪ್ರಚಾರ ಸಭೆ ನಡೆಸಿದರು.
ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ “2006ರಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಸರ್ಕಾರವು ಕೇವಲ 20 ತಿಂಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಕೆಲಸಗಳನ್ನು ಮಾಡಿತು. 189 ಪ್ರಥಮ ದರ್ಜೆ ಕಾಲೇಜು, 500 ಪದವಿ ಪೂರ್ವ ಕಾಲೇಜು ಮತ್ತು 1,600 ಪ್ರೌಢಶಾಲೆಗಳನ್ನು ಆರಂಭಿಸಿತು. ಸ್ವಾತಂತ್ರ್ಯ ನಂತರ ಇಷ್ಟು ದೊಡ್ಡ ಪ್ರಮಾಣದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಆಗಿದ್ದು ಬಿಜೆಪಿ ಜೆಡಿಎಸ್ ಆಡಳಿತದಲ್ಲಿ. 56 ಸಾವಿರ ಉಪನ್ಯಾಸಕರು, ಶಿಕ್ಷಕರ ನೇಮಕ ಮಾಡಿದೆವು. ಬಿಜೆಪಿ ಜೆಡಿಎಸ್ ಅಧಿಕಾರದಲ್ಲಿ ಇದ್ದಾಗ ಶಿಕ್ಷಣ ಕ್ಷೇತ್ರಕ್ಕೆ ಮಾಡಿದ ಕೆಲಸಗಳ ಬಗ್ಗೆ ಶಿಕ್ಷಕರ ಮನೆಗಳಿಗೆ ಎರಡೂ ಪಕ್ಷಗಳ ಕಾರ್ಯಕರ್ತರು ಹೋಗಿ ಮನವೊಲಿಸಿ ‘ಶಿಕ್ಷಣ ಇಲಾಖೆ ಲೋಪಗಳನ್ನು ಸರಿಪಡಿಸಲು ಮತ್ತೆ ನಾರಾಯಣಸ್ವಾಮಿ ಅವರನ್ನು ಗೆಲ್ಲಿಸಬೇಕು” ಎಂದು ಮನವಿ ಮಾಡಿದರು.
ಶಾಸಕ ಬಿ.ಎನ್.ರವಿಕುಮಾರ್, ಜಿ.ಕೆ.ವೆಂಕಟಶಿವಾರೆಡ್ಡಿ, ಛಲವಾದಿ ನಾರಾಯಣಸ್ವಾಮಿ, ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಉಸ್ತುವಾರಿ ನವೀನ್, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಮುನಿಯಪ್ಪ, ಮಾಜಿ ಶಾಸಕ ಎಂ.ರಾಜಣ್ಣ, ತೂಪಲ್ಲಿ ಚೌಡರೆಡ್ಡಿ, ಕೇಶವರೆಡ್ಡಿ, ನರಸಿಂಹಮೂರ್ತಿ, ಸೀಕಲ್ ರಾಮಚಂದ್ರಗೌಡ, ಪ್ರಭಾ ನಾರಾಯಣಗೌಡ, ಬಿಜೆಪಿ ಜಿಲ್ಲಾ ಅಧ್ಯಕ್ಷ ಟಿ.ರಾಮಲಿಂಗಪ್ಪ ಪಾಲ್ಗೊಂಡಿದ್ದರು.