Wednesday, December 6, 2023
HomeGauribidanurಘನ ತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟನೆ

ಘನ ತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟನೆ

- Advertisement -
- Advertisement -
- Advertisement -
- Advertisement -

Gauribidanur : ಗೌರಿಬಿದನೂರು ತಾಲ್ಲೂಕಿನ ವಿದುರಾಶ್ವತ್ಥದಲ್ಲಿನ (Vidurashwatha) ದೇವಾಲಯದ ಆವರಣದಲ್ಲಿ ನಿರ್ಮಾಣ ಮಾಡಿರುವ ಘನ ತ್ಯಾಜ್ಯ ವಿಲೇವಾರಿ ಘಟಕವನ್ನು (Solid Waste Disposal Unit) ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು “ಅಶ್ವತ್ಥನಾರಾಯಣ ದೇವಾಲಯದಲ್ಲಿ ಧಾರ್ಮಿಕ ಕಾರ್ಯಗಳ ಜತೆಗೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ. ದೂರದ ಊರುಗಳಿಂದ ಆಗಮಿಸುವ ಭಕ್ತಾದಿಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವ ಕಾರ್ಯವನ್ನು ಆಡಳಿತ ‌ಮಂಡಳಿ ಮಾಡಬೇಕು. ದೇವಾಲಯದ ಅಭಿವೃದ್ಧಿಗೆ ₹ 2 ಕೋಟಿ ಅನುದಾನ ಅವಶ್ಯಕವಾಗಿದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಎನ್.ಎಂ.ಚಿನ್ನಪ್ಪರೆಡ್ಡಿ, ತಹಶೀಲ್ದಾರ್ ಮಹೇಶ್ ಎಸ್.ಪತ್ರಿ, ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಪಿ.ಎ.ಮರಿರಾಜು, ಸದಸ್ಯ ಬಾಲಾಜಿ, ಶಶಿಕಲ, ಪಾರ್ವತಮ್ಮ, ಗಂಗಾಧರಪ್ಪ, ಸುರೇಶ್, ಶಿವಶಂಕರಪ್ಪ, ಆರ್.ಅಶೋಕ್ ಕುಮಾರ್, ಕುಮಾರಸ್ವಾಮಿ, ಗೋಪಿ, ಮೈಲಾರಪ್ಪ, ಅಶೋಕ್, ಅನಂತರಾಜು ಮತ್ತಿತರರು ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

- Advertisement -
RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
- Advertisment -

Most Popular

error: Content is protected !!