Chikkaballapur : ಚಿಕ್ಕಬಳ್ಳಾಪುರ ತಾಲ್ಲೂಕಿನ ಕೊತ್ತನೂರು ಗ್ರಾಮದಲ್ಲಿ ಮಳೆಯಿಂದ ಹಾನಿಗೆ ಒಳಗಾದ ಪ್ರದೇಶಗಳಿಗೆ (Rain Damage Area) ಕೆಪಿಸಿಸಿ ಸದಸ್ಯ (KPCC Member) ವಿನಯ್ ಎನ್. ಶ್ಯಾಮ್ (Vinay N Shyam) ಭೇಟಿ (Visit) ಗ್ರಾಮಸ್ಥರ ಜತೆ ಮಾತುಕತೆ ನಡೆಸಿದರು.
ಸುದ್ಧಿಗಾರರೊಂದಿಗೆ ಮಾತನಾಡಿದ ವಿನಯ್ ಎನ್. ಶ್ಯಾಮ್ “ಮಳೆಯಿಂದ ರೈತರು ಹಾಗೂ ಜನಸಾಮನ್ಯರ ಜನಜೀವನ ಅಸ್ತವ್ಯಸ್ತಗೊಂಡಿದ್ದರೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್ (M. T. B. Nagaraj) ಮತ್ತು ಆರೋಗ್ಯ ಸಚಿವ ಡಾ.ಕೆ ಸುಧಾಕರ್ (K Sudhakar) ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಿ ದೊಡ್ಡಬಳ್ಳಾಪುರದಲ್ಲಿ (Doddaballapura) ನಡೆದ ಜನಸ್ಪಂದನ (Janaspandana) (Janostava) ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಾರೆ. ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳು, ಶಾಲಾ ಕಟ್ಟಡಗಳಿಗೆ ಹಾನಿಯಾಗಿದೆ. ಆದರೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಕಳೆದ ವರ್ಷ ಮಂಜೂರಾದ ಕಾಮಗಾರಿಗಳು ಇನ್ನೂ ಆರಂಭವಾಗಿಲ್ಲ. ಜಿಲ್ಲೆಯಲ್ಲಿ ಕಳೆದ ವರ್ಷ ಸುರಿದ ಮಳೆಯಿಂದ ಮನೆಗಳನ್ನು ಕಳೆದುಕೊಂಡಿರುವ ಫಲಾನುಭವಿಗಳಿಗೆ ಕೇವಲ ಒಂದು ಕಂತಿನ ಹಣ ಪಾವತಿಸಲಾಗಿದ್ದು ಬೇರೆ ಯಾವುದೇ ಹಣ ದೊರೆತಿಲ್ಲ. ಜಿಲ್ಲಾಡಳಿತ ಕೂಡಲೇ ಫಲಾನುಭವಿಗಳಿಗೆ ಬಾಕಿ ಪರಿಹಾರ ಧನ ಬಿಡುಗಡೆ ಮಾಡಬೇಕು” ಎಂದು ತಿಳಿಸಿದರು.