Chikkaballapur : ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ (Karnataka Vishwakarma Communities Development Corporation Limited) ಅರಿವು ಶೈಕ್ಷಣಿಕ ಸಾಲ ಯೋಜನೆ ನವೀಕರಣ, ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಸಾಲ ಸೌಲಭ್ಯ ಒದಗಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು www.suvidha.karnataka.gov.in ನಲ್ಲಿ ಸಲ್ಲಿಸಬಹುದಾಗಿದೆ
ಅರ್ಜಿಗಳನ್ನು ಸಲ್ಲಿಸಲು ಆ. 20 ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗಾಗಿ https://kvcdcl.karnataka.gov.in, ನಿಗಮದ ಜಿಲ್ಲಾ ಕಚೇರಿ ಅಥವಾ ನಿಗಮದ ಕೇಂದ್ರ ಕಚೇರಿಯ ಸಹಾಯವಾಣಿ 080–22374848 ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.