Home News Chikkaballapur ಮತದಾರರ ಪಟ್ಟಿ ಪರಿಷ್ಕರಣೆಯ ಪ್ರಗತಿ ಪರಿಶೀಲನಾ ಸಭೆ

ಮತದಾರರ ಪಟ್ಟಿ ಪರಿಷ್ಕರಣೆಯ ಪ್ರಗತಿ ಪರಿಶೀಲನಾ ಸಭೆ

0
514
Chikkaballapur Voter List Revision Meeting Dr Ekroop Caur IAS

Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಮತದಾರರ ಪಟ್ಟಿ ಪರಿಷ್ಕರಣೆಯ (Voter List Revision) ಪ್ರಗತಿ ಪರಿಶೀಲನಾ ಸಭೆ (Meeting) ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಮತದಾರರ ಪಟ್ಟಿ ವೀಕ್ಷಕರಾದ ಡಾ|| ಏಕ್‌ರೂಪ್ ಕೌರ್ (Dr. Ekroop Caur, IAS) ” ಅರ್ಹ ಮತದಾರರು ಪಟ್ಟಿಯಿಂದ ಹೊರಗೆ ಉಳಿಯಬಾರದು, ಸೂಕ್ತ ದಾಖಲೆಗಳನ್ನು ಪಡೆದು ನಿಯಮಾನುಸಾರ ಮತದಾರರ ಪಟ್ಟಿಯಿಂದ ಹೆಸರು ತೆಗೆಯ‌‌ಬೇಕು. ಡಿಸೇಂಬರ್ 26 ರ ಒಳಗೆ ಆಕ್ಷೇಪಣೆಗಳನ್ನು ವಿಲೇವಾರಿ ಮಾಡಿ 2023ರ ಜನವರಿ 5 ರಂದು ಮತದಾರರ ಅಂತಿಮ ಪಟ್ಟಿ ಪ್ರಕಟಿಸಲು ಕ್ರಮಕೈಗೊಳ್ಳಬೇಕು” ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಜಿ.ಸಂತೋಷ್ ಕುಮಾರ್, ಚುನಾವಣಾ ಶಾಖೆಯ ತಹಶೀಲ್ದಾರ್ ಮೈಕಲ್, ತಹಶೀಲ್ದಾರರಾದ ಶ್ರೀನಿವಾಸ್, ಗಣಪತಿಶಾಸ್ತ್ರಿ, ವೈ.ವಿ.ರವಿ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಕೆ.ಎಂ.ಮುನೇಗೌಡ, ಸಿಪಿಎಂ ಪ್ರತಿನಿಧಿ ಮುನಿಕೃಷ್ಣಪ್ಪ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!