Sidlaghatta : ಮತದಾರರ ಪಟ್ಟಿಯಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಯುವಕ, ಯುವತಿಯರ ಹೆಸರು ನೋಂದಣಿ ಆಗಬೇಕು. ನಿಮ್ಮ ಹಳ್ಳಿ ಮತ್ತು ಗ್ರಾಮಗಳಲ್ಲಿ ಮತದಾರರ ಸೇರ್ಪಡೆ ಪ್ರಕ್ರಿಯೆ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಇಒ ಮುನಿರಾಜು ವಿದ್ಯಾರ್ಥಿಗಳಿಗೆ ತಿಳಿಸಿದರು.
ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಬುಧವಾರ ತಾಲ್ಲೂಕಿನ ಜಂಗಮಕೋಟೆ ಕ್ರಾಸ್ ಬಳಿ ಇರುವ ಜ್ಞಾನ ಜ್ಯೋತಿ ಶಾಲೆ ಹಾಗೂ ನಡಿಪಿನಾಯಕನಹಳ್ಳಿ ಗ್ರಾಮದ ನವೋದಯ ಶಾಲೆಯ ವಿದ್ಯಾರ್ಥಿಗಳಿಗೆ ಮತದಾರರ ಪಟ್ಟಿ ಪರಿಷ್ಕರಣೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನೂತನವಾಗಿ ಹೆಸರು ಸೇರ್ಪಡೆ ಹೊಂದಲು ಬಯಸುವ ಯುವ ಮತದಾರರು ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು. ಹೆಸರು ಸೇರ್ಪಡೆ, ಅಳಿಸುವಿಕೆ ಮತ್ತು ತಿದ್ದುಪಡಿಯನ್ನು ದೋಷಗಳಿಲ್ಲದೆ ಕೈಗೊಳ್ಳುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕ ಭಾಸ್ಕರಗೌಡ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಪಿಡಿಓ ಯಮುನಾರಾಣಿ, ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.