Chintamani : ಚಿಂತಾಮಣಿ ನಗರದ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿ ಚಿಂತಾಮಣಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಶುಕ್ರವಾರ ವಿಶ್ವ ಏಡ್ಸ್ ದಿನಾಚರಣೆ (World Aids Day) ಕಾರ್ಯಕ್ರಮ ಆಯೋಜಿಸಲಾಗಿತ್ತು. ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶೆ ಎಚ್.ವಿ.ಶೈಲಜಾ ಹಾಗೂ ವಕೀಲರ ಸಂಘದ ಅಧ್ಯಕ್ಷ ನಾ.ಶಂಕರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಕ್ರಂ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿಗಳು, ನಳಂದ ಶಾಲೆಯ ವಿದ್ಯಾರ್ಥಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿ ಏಡ್ಸ್ ಕುರಿತು ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಸಂತೋಷ್ ಕುಮಾರ್ “ಎಚ್‌ಐವಿ ಏಡ್ಸ್‌ಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ದೊರೆಯುತ್ತಿದ್ದು ಲೈಂಗಿಕ ಸಂಗಾತಿಗಳು ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು” ಎಂದರು.
ವಕೀಲರ ಸಂಘದ ಉಪಾಧ್ಯಕ್ಷ ಎನ್.ಕೆ.ಪ್ರಸಾದ್, ಕಾರ್ಯದರ್ಶಿ ಕಿರಣ್, ಹಿರಿಯ ಆರೋಗ್ಯ ನಿರೀಕ್ಷಕ ಶ್ರೀನಿವಾಸರೆಡ್ಡಿ, ಲಕ್ಷ್ಮಣರೆಡ್ಡಿ, ಶಂಕರರೆಡ್ಡಿ, ಸತೀಶ್, ಸರಸ್ವತಮ್ಮ, ಮಹಾಲಕ್ಷ್ಮಿ, ವರಲಕ್ಷ್ಮಿ, ಗಾಯಿತ್ರಿ ಮತ್ತಿತರರು ಉಪಸ್ಥಿತರಿದ್ದರು.