Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು (World Day against Child Labour) ಸಾರ್ವಜನಿಕರು ಹಾಗೂ ಸರ್ಕಾರಿ ಸಂಸ್ಥೆಗಳಲ್ಲಿ ಆಚರಿಸಿದರು.
ಚಿಕ್ಕಬಳ್ಳಾಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬುಧವಾರ ಬೆಳಿಗ್ಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಿಂದ ಜಾಗೃತಿ ಜಾಥಾ ನಡೆಸಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ನಡೆಸಲಾಯಿತು.
ಚಿಂತಾಮಣಿ :
ಚಿಂತಾಮಣಿ ನಗರದ ಹೊರವಲಯದ ಆರ್.ಕೆ.ವಿಷನ್ ವಿದ್ಯಾಸಂಸ್ಥೆಯಲ್ಲಿ ಬುಧವಾರ ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು.
ಗೌರಿಬಿದನೂರು :
ಗೌರಿಬಿದನೂರು ಪಟ್ಟಣದ ಮುನೇಶ್ವರ ಬಡಾವಣೆಯ ತೀರ್ಥ ಶಾಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಆಚರಿಸಲಾಯಿತು.