Chikkaballapur : ಚಿಕ್ಕಬಳ್ಳಾಪುರ ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಆಶ್ರಯದಲ್ಲಿ ಭಾನುವಾರ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ (World Day Against Child Labour) ಕಾರ್ಯಕ್ರಮ ನಡೆಯಿತು. ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಿಂದ ಬಿ.ಬಿ. ರಸ್ತೆ ಮೂಲಕ ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆ (Elimination of Child Labour) ಕುರಿತು ವಿದ್ಯಾರ್ಥಿಗಳ ಜಾಗೃತಿ ಜಾಥಾ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಹಶೀಲ್ದಾರ್ ಗಣಪತಿ ಶಾಸ್ತ್ರಿ “ಸಂವಿಧಾನದಲ್ಲಿ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ವಿಶೇಷ ಸ್ಥಾನ ಕಲ್ಪಿಸಲಾಗಿದ್ದು ಶಿಕ್ಷಣವೇ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಮದ್ದು. ಮಕ್ಕಳಿಗೆ ಬಾಲ್ಯ ಅಮೂಲ್ಯವಾದುದು. ಹಿಂಸಾ ಮನೋಭಾವದ ವಾತಾವರಣ ಇದ್ದಲ್ಲಿ ಒಳ್ಳೆಯ ಪ್ರಜೆಯನ್ನು ಕಾಣಲು ಸಾಧ್ಯವಿಲ್ಲ. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸರ್ಕಾರವು ಮಕ್ಕಳ ಸಹಾಯವಾಣಿ 1098 ರಚಿಸಿದ್ದು ನಿಮ್ಮ ಸುತ್ತ ಬಾಲಕಾರ್ಮಿಕರು ಕಂಡುಬಂದರೆ ಕೂಡಲೇ ಮಕ್ಕಳ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಅಥವಾ ದೂರು ಸಲ್ಲಿಸಿ ಬಾಲಕಾರ್ಮಿಕ ಪದ್ಧತಿ ಎಂಬ ಪಿಡುಗನ್ನು ಹೋಗಲಾಡಿಸಬೇಕು” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲಕ್ಷ್ಮಿಕಾಂತ್ ಜೆ. ಮಿಸ್ಕಿನ್, ನ್ಯಾಯಾಧೀಶ ಶಿವಪ್ರಸಾದ್, ಬಿ.ಎಲ್. ಆಶಾ, ಜಿಲ್ಲಾ ಕಾರ್ಮಿಕ ಅಧಿಕಾರಿ ಆರ್. ವರಲಕ್ಷ್ಮಿ, ಕಾರ್ಮಿಕ ನಿರೀಕ್ಷಕಿ ಮಂಜುಳಾ, ಶಿಶು ಅಭಿವೃದ್ಧಿ ಅಧಿಕಾರಿ ಗಂಗಾಧರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಷಾದ್ರಿ, ಸಿಪಿಐ ಪ್ರಶಾಂತ್, ಅಂಗನವಾಡಿ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Facebook: https://www.facebook.com/hicbpur
Twitter: https://twitter.com/hicbpur
Your email address will not be published. Required fields are marked *
Save my name, email, and website in this browser for the next time I comment.
2021 Chikkaballapur.com