Chikkaballapur : ಚಿಕ್ಕಬಳ್ಳಾಪುರ ಅರೋಗ್ಯ ಇಲಾಖೆಯಿಂದ ಜಿಲ್ಲೆಯಾದ್ಯಂತ ನವೆಂಬರ್ 15 ರಂದು ವಿಶ್ವ ಮಧುಮೇಹ ದಿನವನ್ನು ಆಚರಿಸಲಾಯಿತ್ತು.
Chintamani : ಮಂಗಳವಾರ ಆರೋಗ್ಯ ಇಲಾಖೆಯು ಚಿಂತಾಮಣಿ ನಗರದ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿ ವಿಶ್ವ ಮಧುಮೇಹ ಸಪ್ತಾಹ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಗೆ ಚಿಂತಾಮಣಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸ್ವಾತಿ ಚಾಲನೆ ನೀಡಿದರು.
35 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಉದಾಸೀನ ಮಾಡದೆ ಮಧುಮೇಹ ಕಾಯಿಲೆಯ ಪರೀಕ್ಷೆ ಮಾಡಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು. ಪ್ರತಿವರ್ಷ ನವೆಂಬರ್ 15ರಂದು ವಿಶ್ವ ಮಧುಮೇಹ ದಿನವನ್ನು ಆಚರಿಸಲಿದ್ದು, ಆರೋಗ್ಯ ಇಲಾಖೆಯು ಒಂದು ವಾರ ಕಾಲ ವಿಶ್ವ ಮಧುಮೇಹ ಸಪ್ತಾಹವನ್ನಾಗಿ ಆಚರಿಸಿ ರಾಷ್ಟ್ರೀಯ ಕ್ಯಾನ್ಸರ್, ಮಧುಮೇಹ, ಹೃದಯ ಸಂಬಂಧಿತ ಹಾಗೂ ಪಾರ್ಶ್ವವಾಯು ರೋಗಗಳನ್ನು ತಡೆಗಟ್ಟುವಿಕೆ, ನಿಯಂತ್ರಣದ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುವುದು, ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸ್ವಾತಿ ತಿಳಿಸಿದರು.
ಚಿಂತಾಮಣಿ ನಗರದ ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಸಂತೋಷ್, ಡಾ.ಬಸವಮಂಜೇಶ್, ಹಿರಿಯ ಆರೋಗ್ಯ ನಿರೀಕ್ಷಕ ಶ್ರೀನಿವಾಸರೆಡ್ಡಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಸಪ್ತಾಹದಲ್ಲಿ ಭಾಗವಹಿಸಿದ್ದರು.
Sidlaghatta : ಶಿಡ್ಲಘಟ್ಟ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಮಂಗಳವಾರ ವಿಶ್ವ ಮಧುಮೇಹ ಸಪ್ತಾಹ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ವಾಣಿ ಮಾತನಾಡಿದರು.
ಮಧುಮೇಹ ಎನ್ನುವುದು ಸದ್ದಿಲ್ಲದೆ ಕೊಲ್ಲುವಂತ ಕಾಯಿಲೆ. ಇದು ಜೀವ ಹಾಗೂ ಜೀವನ ಎರಡನ್ನೂ ಹಿಂಡಿ ಹಿಪ್ಪೆ ಮಾಡಿ ಬಿಡುತ್ತದೆ. ಮಧುಮೇಹವು ಇಂದು ವಿಶ್ವದಾದ್ಯಂತ ಜನರಲ್ಲಿ ಕಾಣಿಸಿಕೊಳ್ಳುವ ಸಾಮಾನ್ಯ ಕಾಯಿಲೆಯಾಗಿದೆ. ಮಧುಮೇಹದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಮಧುಮೇಹ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.
ಸಕಾಲದಲ್ಲಿ ರಕ್ತದೊತ್ತಡ, ಮಧುಮೇಹ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯುವ ಮೂಲಕ ಮಧುಮೇಹದಿಂದ ಆಗುವಂತಹ ದುಷ್ಪರಿಣಾಮಗಳನ್ನು ತಡೆಯಲು ಮುಂದಾಗಬೇಕು. 30 ವರ್ಷ ಮೇಲ್ಪಟ್ಟವರು ನಿಯಮಿತವಾಗಿ ರಕ್ತದೊತ್ತಡ, ಮಧುಮೇಹ ಪರೀಕ್ಷೆ ಮಾಡಿಸಿಕೊಳ್ಳ ಬೇಕು. ಇದರಿಂದ ಮುಂದಾಗುವಂತಹ ದುಷ್ಪರಿಣಾಮಗಳನ್ನು ತಡೆಯಬಹುದಾಗಿದೆ. ಮಧುಮೇಹ ಬಂದರೆ ಕಣ್ಣು, ಮೂತ್ರಪಿಂಡ, ಹೃದಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಹಾಗಾಗಿ ಕಾಲಕಾಲಕ್ಕೆ ತಪಾಸಣೆ ಮಾಡಿಸಿಕೊಂಡು ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಹೇಳಿದರು.
ಸಾರ್ವಜನಿಕ ಅಸ್ಪತ್ರೆಯ ಡಾ.ಸೊನಾಲಿ ಮಾತನಾಡಿ, ಪ್ರತಿ ವರ್ಷ ನವೆಂಬರ್ 14ರಂದು ವಿಶ್ವ ಮಧುಮೇಹ ದಿನಾಚರಣೆ ಆಚರಿಸಲಾಗುತ್ತಿದೆ. ಈ ಬಾರಿ “ಮಧುಮೇಹಕ್ಕೆ ಮತ್ತು ಮಧುಮೇಹದ ಆರೈಕೆಗೆ ಅವಕಾಶ ಕಲ್ಪಿಸಬೇಕು” ಎಂಬುದು ವಿಶ್ವ ಆರೋಗ್ಯ ಸಂಸ್ಥೆಯ ಘೋಷವಾಕ್ಯವಾಗಿದೆ ಎಂದರು.
ಮಧುಮೇಹ ನಿಯಂತ್ರಣಕ್ಕಾಗಿ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ನವೆಂಬರ್ 14ರಿಂದ 20ರ ವರೆಗೆ ಒಂದು ವಾರ ಕಾಲ ಪೂರ್ವಭಾವಿ ತಪಾಸಣೆ ಮೂಲಕ ರೋಗ ಪತ್ತೆ ಹಚ್ಚುವ ಸಪ್ತಾಹ ನಡೆಸಲಾಗುತ್ತಿದೆ. 30 ವರ್ಷ ಮೇಲ್ಪಟ್ಟವರನ್ನು ಮಧುಮೇಹ ತಪಾಸಣೆಗೆ ಒಳಪಡಿಸಬೇಕಾಗಿದೆ. ಮಧುಮೇಹ ಪರೀಕ್ಷೆ ಮಾಡಿಸಿ ಕೊಳ್ಳುವ ಮೂಲಕ ಸಮುದಾಯದಲ್ಲಿ ಉಂಟಾಗುವ ಸಾವು, ನೋವುಗಳನ್ನು ತಡೆಯಲು ಆರೋಗ್ಯ ಇಲಾಖೆಯೊಂದಿಗೆ ಜನಸಾಮಾನ್ಯರು ಕೈಜೋಡಿಸಬೇಕು ಎಂದು ಸಲಹೆ ನೀಡಿದರು.
ಮಧುಮೇಹವನ್ನು ಸಂಪೂರ್ಣ ನಿಯಂತ್ರಣದಲ್ಲಿ ಇಟ್ಟು ಕೊಳ್ಳಬಹುದಾಗಿದೆ. ಆರೋಗ್ಯ ಶೈಲಿ, ನಮ್ಮ ಹವ್ಯಾಸದ ಮೇಲೆ ಈ ಕಾಯಿಲೆ ಬರುವುದು ಅವಲಂಬಿತವಾಗಿರುತ್ತದೆ. ಜನರು ದಿನನಿತ್ಯ ಜೀವನದಲ್ಲಿ ಆಹಾರ ಪದ್ಧತಿ, ದೈಹಿಕ ಚಟುವಟಿಕೆಗಳ ಬಗ್ಗೆ ಅರಿವು ಮೂಡಿಸಿದರೆ ಸಾಕಷ್ಟು ಪ್ರಮಾಣದಲ್ಲಿ ನಿಯಂತ್ರಿಸಬಹುದು ಎಂದರು.
ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿಯ ಸಿಬ್ಬಂದಿ, ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ, ನಗರ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು
Facebook: https://www.facebook.com/hicbpur
Twitter: https://twitter.com/hicbpur
Your email address will not be published. Required fields are marked *
Save my name, email, and website in this browser for the next time I comment.
2021 Chikkaballapur.com