Home News Chikkaballapur ಜಿಲ್ಲೆಯಾದ್ಯಂತ ವಿಶ್ವ ಪರಿಸರ ದಿನಾಚರಣೆ

ಜಿಲ್ಲೆಯಾದ್ಯಂತ ವಿಶ್ವ ಪರಿಸರ ದಿನಾಚರಣೆ

0

Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ, ನಗರಸಭೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ನಗರದಲ್ಲಿ ಬುಧವಾರ ನಡೆದ ವಿಶ್ವ ಪರಿಸರ ದಿನಾಚರಣೆ (World Environment Day) ಕಾರ್ಯಕ್ರಮ ಆಚರಿಸಲಾಯಿತು. ನಗರದ ಅಗಲಗುರ್ಕಿಯ ಬಿಜಿಎಸ್ ಇಂಗ್ಲಿಷ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವೃಕ್ಷವಂದನೆ ಕಾರ್ಯಕ್ರಮ ನಡೆಯಿತು.

ಚಿಂತಾಮಣಿ :

World Environment Day  Chintamani

ಚಿಂತಾಮಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ, ಜನಪರ ಫೌಂಡೇಷನ್, ಪರಿಸರಕ್ಕಾಗಿ ನಾವು- ಚಿಕ್ಕಬಳ್ಳಾಪುರ, ಯುವಯಾನ ಚಿಂತಾಮಣಿ, ಇಕೋ ಕ್ಲಬ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಚಿಂತಾಮಣಿ ಸಹಭಾಗಿತ್ವದಲ್ಲಿ ಬುಧವಾರ ಕಾಲೇಜಿನಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಗೌರಿಬಿದನೂರು:

ಕಾನೂನು ಸೇವೆಗಳ ಪ್ರಾಧಿಕಾರ, ಗೌರಿಬಿದನೂರು ನಗರಸಭೆ, ಅರಣ್ಯ ಇಲಾಖೆ, ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಬುಧವಾರ ಗೌರಿಬಿದನೂರು ತಾಲ್ಲೂಕಿನ ಸಮಾನತಾ ಸೌಧ, ಗ್ರಾಮಾಂತರ ಪೊಲೀಸ್ ಠಾಣೆ ವಸತಿ ಗೃಹಗಳ ಹತ್ತಿರ ಮತ್ತು ಇಡಗೂರು ರಸ್ತೆಯ ಘನ ತ್ಯಾಜ್ಯ ವಿಲೇವಾರಿ ಘಟಕದ ಕಡೆಗಳಲ್ಲಿ ಬುಧವಾರ ಸಸಿ ನೆಟ್ಟುವ ಮೂಲಕ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು.

ಬಾಗೇಪಲ್ಲಿ :

ಬಾಗೇಪಲ್ಲಿಯ ಪಿಎಂಶ್ರೀ ಬಾಲಕಿಯರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಣ್ಯರು ವಿದ್ಯಾರ್ಥಿಗಳಿಗೆ ಸಸಿ ವಿತರಿಸಿದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version