Home News Chikkaballapur ಜಿಲ್ಲೆಯಾದ್ಯಂತ ವಿಶ್ವ ತಂಬಾಕು ವಿರೋಧಿ ದಿನಾಚರಣೆ (World No Tobacco Day)

ಜಿಲ್ಲೆಯಾದ್ಯಂತ ವಿಶ್ವ ತಂಬಾಕು ವಿರೋಧಿ ದಿನಾಚರಣೆ (World No Tobacco Day)

0

Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಂಬಾಕು ನಿಯಂತ್ರಣ ಕೋಶ ವತಿಯಿಂದ ಚಿಕ್ಕಬಳ್ಳಾಪುರ ನಗರದ KV Campus ನಲ್ಲಿ ಮಂಗಳವಾರ ವಿಶ್ವ ತಂಬಾಕು ರಹಿತ ದಿನಾಚರಣೆ (world no tobacco day) ಕಾರ್ಯಕ್ರಮ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲಕ್ಷ್ಮಿಕಾಂತ್ ಜೆ.ಮಿಸ್ಕಿನ್, ತಂಬಾಕು ಸೇವನೆ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದ್ದೆ ಎಷ್ಟೇ ಹಣವಿದ್ದರೂ ವಾಸಿ ಮಾಡಿಕೊಳ್ಳಲು ಸಾಧ್ಯವಾಗದ ಕಾಯಿಲೆಗಳನ್ನು ತರುತ್ತದೆ. ಜನರು ತಂಬಾಕು ಸೇವನೆಯಿಂದ ದೂರವಿರಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದಿರಾ ಆರ್. ಕಬಾಡೆ, ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಯಲ್ಲಾ ರಮೇಶ್ ಬಾಬು, ಪ್ರಾಂಶುಪಾಲ ಹನುಮಂತರೆಡ್ಡಿ, ಡಾ.ರುದ್ರಮೂರ್ತಿ, ಡಾ.ಮಂಜುಳಾ ಉಪಸ್ಥಿತರಿದ್ದರು.

ಬಾಗೇಪಲ್ಲಿ

world no tobacco day Program Bagepalli

Bagepalli ನಗರದ National Pre-University College ನಲ್ಲಿ ಮಂಗಳವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ತಾಲ್ಲೂಕು ಆಡಳಿತ, ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲ್ಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಂಬಾಕು ನಿಯಂತ್ರಣ ಕೋಶದ ವತಿಯಿಂದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

GMFC ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಕೆ.ರಂಗಸ್ವಾಮಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್.ಸತ್ಯನಾರಾಯಣ, ಪ್ರಾಂಶುಪಾಲ ಪ್ರೊ.ಕೆ.ಟಿ.ವೀರಾಂಜನೇಯ, ಚಿನ್ನಸ್ವಾಮಿ, ಮುಸ್ತಾಕ್ ಅಹಮದ್, ಕಾರ್ಯದರ್ಶಿ ವೆಂಕಟೇಶ್, ವಕೀಲ ವೆಂಕಟನಾರಾಯಣ, ನಾಗಭೂಷಣ್, ಕಾಲೇಜಿನ ಉಪನ್ಯಾಸಕ ವೆಂಕಟೇಶಬಾಬು, ತಾಲ್ಲೂಕು ಹಿರಿಯ ಆರೋಗ್ಯ ಶುಶ್ರೂಷಕಿ ಸರಸ್ವತಮ್ಮ, ಸುಭಾನ್‍ಸಾಬ್ ಉಪಸ್ಥಿತರಿದ್ದರು.

ಗೌರಿಬಿದನೂರು

Gouribidanur ನಗರದ ಕೋಟೆ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ತಂಬಾಕು ಮುಕ್ತ ಸಮಾಜ ನಿರ್ಮಾಣದ ಬಗ್ಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಎಂ.ಕಲ್ಮೇಶ್ ಸಂಕಲ್ಪ ಮಾಡಿಸಿದರು.

ಮಂಗಳವಾರ Gouribidanur ನಗರದ ಹೊರವಲಯದಲ್ಲಿರುವ Leader School ನಲ್ಲಿ ತಂಬಾಕು ವಿರೋಧಿ ದಿನಾಚರಣೆಯನ್ನು ವಿದ್ಯಾರ್ಥಿಗಳು ಲೀಡರ್ ಶಾಲೆಯಿಂದ ವಿದ್ಯಾರ್ಥಿಗಳು ಗುಂಡಾಪುರ ಗ್ರಾಮದವರೆಗೆ ತಂಬಾಕು ಸೇವನೆಯಿಂದ ಮಾನವನ ದೇಹದ ಮೇಲೆ ಬೀರುವ ಪರಿಣಾಮಗಳ ಬಗ್ಗೆ ಭಿತ್ತಿ ಪತ್ರಗಳನ್ನು ಹಿಡಿದು ಜಾಥಾ ಮಾಡುವ ಮೂಲಕ ವಿಭಿನ್ನವಾಗಿ ಆಚರಿಸಲಾಯಿತು.

ಶಿಡ್ಲಘಟ್ಟ

ಮಂಗಳವಾರ Sidlaghatta ನಗರದ ಡಾಲ್ಫಿನ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version