Chintamani : ಚಿಂತಾಮಣಿ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಶನಿವಾರ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ (World Population Day) ಕಾರ್ಯಕ್ರಮವನ್ನು ರಾಜ್ಯ ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಸಿ. ಸುಧಾಕರ್ (Dr M C Sudhakar) ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಜನಸಂಖ್ಯೆಯ ಕ್ಷಿಪ್ರ ಬೆಳವಣಿಗೆಯಿಂದ ಆಗುತ್ತಿರುವ ಸವಾಲುಗಳು. ಸಮಾಜ ಮತ್ತು ದೇಶದ ಭವಿಷ್ಯಕ್ಕಾಗಿ ಜನಸಂಖ್ಯೆಯ ಬೆಳವಣಿಗೆಯನ್ನು ನಿಯಂತ್ರಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಚೀನಾ ಜನಸಂಖ್ಯಾ ಸ್ಫೋಟದಿಂದ ಎದುರಿಸುತ್ತಿರುವ ಸಮಸ್ಯೆಗಳನ್ನು ಡಾ.ಸುಧಾಕರ್ ಪ್ರಸ್ತಾಪಿಸಿದರು.
ಕಾರ್ಯಕ್ರಮದಲ್ಲಿ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಡಾ.ಮುನಿರೆಡ್ಡಿ ಅವರಿಂದ ಜನಸಂಖ್ಯೆ ನಿಯಂತ್ರಣ ಕುರಿತು ಉಪನ್ಯಾಸ ನಡೆಯಿತು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ್ ಕುಮಾರ್, ಜಿಲ್ಲಾ ಸಂರಕ್ಷಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಕಾಶ್, ತಾಲೂಕು ಆರೋಗ್ಯಾಧಿಕಾರಿ ರಾಮಚಂದ್ರರೆಡ್ಡಿ, ಕಾರ್ಯನಿರ್ವಹಣಾಧಿಕಾರಿ ಆನಂದ್, ಎಎಸ್ಪಿ ಕುಶಾಲ್ ಚೌಕ್ಸೆ, ಗ್ರೇಡ್-2 ತಹಸೀಲ್ದಾರ್ ರಾಜೇಂದ್ರ, ಕೃಷಿಕ ಸಮಾಜದ ಅಧ್ಯಕ್ಷ ಎಂ.ಗೋವಿಂದಪ್ಪ, ಟಿಎಪಿಸಿಎಂಎಸ್ ಅಧ್ಯಕ್ಷೆ ಮಂಗಳಾ ಚಂದ್ರಪ್ಪ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.