Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕದಿಂದ ಚಿಕ್ಕಬಳ್ಳಾಪುರ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಬುಧವಾರ ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮ (National Rabies Control Programme) ಹಾಗೂ ವಿಶ್ವ ರೇಬಿಸ್ ದಿನಾಚರಣೆ (World Rabies Day) ಯ ಅಂಗವಾಗಿ ಜನ ಜಾಗೃತಿ ಜಾಥಾ (Public Awareness March) ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್ ಮಹೇಶ್ “ಹುಚ್ಚು ನಾಯಿಗಳಲ್ಲಿ ಉತ್ಪತ್ತಿಯಾಗುವ ಲಾಲಾರಸದ ವೈರಾಣುವಿನಿಂದ ಮನುಷ್ಯರಿಗೆ ಹರಡುವ ರೇಬಿಸ್ ರೋಗವು ಮಾರಣಾಂತಿಕ ಕಾಯಿಲೆಯಾಗಿದೆ. ಈ ರೋಗ ಗುಣಪಡಿಸಲು ಯಾವುದೇ ಆರೋಗ್ಯ ಚಿಕಿತ್ಸೆವಿಲ್ಲದಿರುವುದರಿಂದ ರೇಬಿಸ್ ನಿಯಂತ್ರಣಕ್ಕೆ ಎಚ್ಚರ ವಹಿಸಬೇಕು. ಸಾರ್ವಜನಿಕರು ನಾಯಿ ಕಡಿತಕ್ಕೆ ಒಳಗಾದಾಗ ಪ್ರಾಥಮಿಕ ಸುರಕ್ಷತಾ ಕ್ರಮವನ್ನು ಪಾಲಿಸಬೇಕು ಮತ್ತು ಸಾಕು ನಾಯಿಗಳಿಗೆ ನಿಯಮಿತವಾಗಿ ರೇಬಿಸ್ ನಿರೋಧಕ ಲಸಿಕೆ ಹಾಕಿಸಬೇಕು” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಂ.ರವಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಹರೀಶ್,RMO ರಮೇಶ್, ವೈದ್ಯರಾದ ಡಾ.ಶಿವಕುಮಾರ್, ಡಾ.ವಿಜಯ, ತಾಲ್ಲೂಕು ಆರೋಗ್ಯಾಧಿಕಾರಿ ಮಂಜುಳಾ ಮತ್ತಿತರರು ಉಪಸ್ಥಿತರಿದ್ದರು.