Chintamani : ಭಾನುವಾರ ಕೃಷಿ ವಿಜ್ಞಾನ ಕೇಂದ್ರ ವತಿಯಿಂದ ಚಿಂತಾಮಣಿ ತಾಲ್ಲೂಕಿನ ಹನುಮೈಗಾರಹಳ್ಳಿಯಲ್ಲಿ ವಿಶ್ವ ಮಣ್ಣು ದಿನಾಚರಣೆಯನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ನಗರದ ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ ಡಾ.ಬಿ.ಗಾಯಿತ್ರಿ ” ‘ ಮಣ್ಣು ಸವಳಾಗುವಿಕೆ ನಿಲ್ಲಿಸಿ, ಮಣ್ಣಿನ ಉತ್ಪಾದಕತೆ ಹೆಚ್ಚಿಸಿ’ ಎನ್ನುವ ಘೋಷವಾಕ್ಯದಿಂದದೊಂಡಿಗೆ ಡಿಸೆಂಬರ್ 5ರಂದು ವಿಶ್ವ ಮಣ್ಣು ದಿನ ಆಚರಿಸಲಾಗುತ್ತಿದೆ. ಆರೋಗ್ಯಕರ ಹಾಗೂ ಸತ್ವಯುತವಾದ ಮಣ್ಣಿನ ಪ್ರಾಮುಖ್ಯತೆಯನ್ನು ರೈತರು ಅರಿತು ಮಣ್ಣಿನ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆ ಮಾಡಬೇಕು.” ಎಂದು ಹೇಳಿದರು.
ಮಣ್ಣಿನ ಆರೋಗ್ಯ ಮತ್ತು ಮನುಷ್ಯನ ಆರೋಗ್ಯ ನೇರ ಸಂಬಂಧ ಹೊಂದಿದೆ. ಅನೇಕ ದೈಹಿಕ ಮತ್ತು ಮಾನಸಿಕ ಕಾಯಿಲೆಗಳು ಮಣ್ಣಿನಲ್ಲಿರುವ ಪೋಷಕಾಂಶಗಳ ಕೊರತೆಯ ಪರಿಣಾಮವಾಗಿದೆ. ಹಾಗಾಗಿ ಮಣ್ಣಿನ ಆರೋಗ್ಯ ನಿರ್ವಹಣೆ ಅಗತ್ಯ ಎಂದು ವಿಜ್ಞಾನಿ ಡಾ.ಕೆ.ಎಸ್. ವಿನೋದ ಅಭಿಪ್ರಾಯಪಟ್ಟರು.
ಮನುಷ್ಯನ ಆರೋಗ್ಯ ಮತ್ತು ಮಣ್ಣಿನ ಆರೋಗ್ಯ ಎರಡಕ್ಕೂ ನೇರ ಸಂಬಂಧವಿದೆ. ಮಣ್ಣಿನಲ್ಲಿರುವ ಪೋಷಕಾಂಶಗಳ ಕೊರತೆಯ ಪರಿಣಾಮವಾಗಿ ಹೆಚ್ಚಿನ ದೈಹಿಕ ಮತ್ತು ಮಾನಸಿಕ ಕಾಯಿಲೆಗಳು ಉದ್ಭವಿಸಿದ್ದು ಮಣ್ಣಿನ ಆರೋಗ್ಯ ನಿರ್ವಹಣೆ ಮುಖ್ಯ, ಎಂದು ವಿಜ್ಞಾನಿ ಡಾ.ಕೆ.ಎಸ್. ವಿನೋದ ತಿಳಿಸಿದರು.
ಬೇಸಾಯಶಾಸ್ತ್ರದ ವಿಜ್ಞಾನಿ ವಿಶ್ವನಾಥ, ಹನುಮೈಗಾರಹಳ್ಳಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಭಾಕರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.