Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೋಲಿಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರ ಹೊರವಲಯದ ಚಿತ್ರಾವತಿಯ ವಿಶ್ವವಿದ್ಯಾಲಯ ಬಿಇಡಿ ಕಾಲೇಜಿನಲ್ಲಿ ಗುರುವಾರ ‘ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ’ (World Suicide Prevention Day) ಅಂಗವಾಗಿ ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸಿ.ರಾಜಶೇಖರ್ “ಒತ್ತಡಕ್ಕೆ ಒಳಗಾಗಿ ಮಾನಸಿಕ ಖಿನ್ನತೆಯಿಂದ ಕೆಲವರು ಆತ್ಮಹತ್ಯೆಗೆ ಯತ್ನಿಸುತ್ತಾರೆ. ಸಮಸ್ಯೆಗಳಿಗೆ ಆತ್ಮಹತ್ಯೆಯೇ ಪರಿಹಾರವಲ್ಲ ಹಾಗೆಯೇ ಆತ್ಮಹತ್ಯೆಗೆ ಯತ್ನಿಸು ವುದು, ಪ್ರಚೋದಿಸುವುದು ಅಪರಾಧ. ಪೌಷ್ಠಿಕ ಆಹಾರ ಸೇವನೆ, ಧ್ಯಾನ, ವ್ಯಾಯಾಮದಿಂದ ಮತ್ತು ಸಕಾರಾತ್ಮಕ ಆಲೋಚನೆಗಳಿಂದ ಮನಸ್ಸನ್ನು ಸುಸ್ಥಿರವಾಗಿ ಇಟ್ಟುಕೊಳ್ಳಬಹುದು” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್, ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಲಕ್ಷ್ಮಿ ಕಾಂತ್ ಜೆ ಮಿಸ್ಕಿನ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೋಡಿರಂಗಪ್ಪ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹರೀಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ಮಹೇಶ್ ಕುಮಾರ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಶಿವಕುಮಾರ್, ಮನೋವೈದ್ಯರಾದ ಡಾ.ಹೇಮಂತ್ ಕುಮಾರ್, ಡಾ.ಲಾವಣ್ಯ, ಪ್ರಾಂಶುಪಾಲರಾದ ಲೀಲಾವತಿ ಮತ್ತಿತರರು ಉಪಸ್ಥಿತರಿದ್ದರು.