Chintamani : ಚಿಕ್ಕಬಳ್ಳಾಪುರದ ಪೆರೇಸಂದ್ರ ಮತ್ತು ಆರ್ಜೇಹಳ್ಳಿ ಸರ್ಕಾರಿ ಪೌಢಶಾಲಾ ವಿದ್ಯಾರ್ಥಿಗಳು ಮಂಗಳವಾರ ವಿಶ್ವ ಪ್ರವಾಸೋದ್ಯಮ ದಿನಾಚರಣೆ (World Tourism Day) ಅಂಗವಾಗಿ ಚಿಂತಾಮಣಿ ತಾಲ್ಲೂಕಿನ ಕೈವಾರದ ಯೋಗಿನಾರೇಯಣ ಮಠ (Sri Kaiwara Yogi Nareyana Mutt) ಕ್ಕೆ ಭೇಟಿ ನೀಡಿದ್ದರು.
ಈ ಸಂಧರ್ಭದಲ್ಲಿ ಜಿಲ್ಲಾ ಪ್ರವಾಸೋದ್ಯಮ ಸಹಾಯಕ ನಿರ್ದೇಶಕಿ ರಾಜೇಶ್ವರಿ ಮಾತನಾಡಿ ” ಪ್ರವಾಸದಿಂದ ನಮ್ಮ ಜೀವನದ ಮೇಲೆ ಸಾಮಾಜಿಕ, ಸಾಂಸ್ಕೃತಿಕ ಪರಿಣಾಮ ಬೀರುತ್ತದೆ. ಮುಂದಿನ ಪೀಳಿಗೆಗೆ ನಮ್ಮ ಪರಂಪರೆ ಮಹತ್ವದ ಅರಿವನ್ನು ಮೂಡಿಸುವುದು ಪ್ರವಾಸದ ಗುರಿಯಾಗಿದ್ದು ಪ್ರವಾಸೋದ್ಯಮದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದೇ ಮುಖ್ಯ ಉದ್ದೇಶವಾಗಿದೆ” ಎಂದು ಹೇಳಿದರು.
ಪ್ರವಚನಕಾರ ತಳಗವಾರ ಆನಂದ್, ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕರಾದ ಪುರುಷೋತ್ತಮ್, ಶಿಕ್ಷಕರಾದ ಡಿ.ಸಿ.ನರಸಿಂಹಮೂರ್ತಿ, ಭವಾನಿ, ಮಠದ ಆಡಳಿತಾಧಿಕಾರಿ ಕೆ.ಲಕ್ಷ್ಮಿನಾರಾಯಣ್ ಮುಂತಾದವರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.