Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಬುಧವಾರ ವಿಶ್ವ ಪ್ರವಾಸೋದ್ಯಮ ದಿನಾಚರಣೆ (World Tourism Day) ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬೀಜ ಬಿತ್ತುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ “ಹಸಿರು–ಸ್ವಚ್ಛ ಚಿಕ್ಕಬಳ್ಳಾಪುರ ಮತ್ತು ಪ್ಲಾಸ್ಟಿಕ್ ಮುಕ್ತ ಚಿಕ್ಕಬಳ್ಳಾಪುರಕ್ಕೆ ಜಿಲ್ಲಾಡಳಿತ ಸಂಕಲ್ಪ ಮಾಡಿದ್ದು ಜಿಲ್ಲೆಯ ನಾಗರಿಕರು ಮತ್ತು ಪ್ರವಾಸಿಗರು ಇದಕ್ಕೆ ಸಹಕಾರಿಸಬೇಕು . ಪ್ರವಾಸ ರಾಜ್ಯಕ್ಕೆ ಮತ್ತು ರಾಷ್ಟ್ರಕ್ಕೆ ಉದ್ಯಮವಾಗಿ ಪರಿವರ್ತನೆಯಾಗಿದ್ದು ಜಗತ್ತಿನ ಹಲವಾರು ದೇಶಗಳು ಪ್ರವಾಸೋದ್ಯಮದ ಮೇಲೆ ಅಲಂಭಿತವಾಗಿದೆ. ಪ್ಲಾಸ್ಟಿಕ್ ಬಳಕೆಯಿಂದ ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗಳು ಬರಲಿದ್ದು. ಪ್ಲಾಸ್ಟಿಕ್ ಬದಲು ಲೋಹದ ಪಾತ್ರೆ ಬಳಸಿ ಆರೊಗ್ಯ ಕಾಪಾಡಿಕೊಳ್ಳಿ, ಮನೆಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಮತ್ತು ಬಟ್ಟೆ ಚೀಲ ಬಳಸಿ, ಪ್ಲಾಸ್ಟಿಕ್ ಬಳಸಬೇಡಿ, ಬಳಸಲು ಬೀಡಬೇಡಿ. ಹಸಿಕಸ ಮತ್ತು ಒಣಕಸವನ್ನು ಬೇರ್ಪಡಿಸಿ ಕಸ ಸಂಗ್ರಹಣೆ ಮಾಡಲು ಬಂದವರಿಗೆ ಕೊಡಿ” ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ, ಗಾರ್ಡನ್ ಸಿಟಿ ಫಾರ್ಮಸ್ ಹಾಗೂ ಕಾರ್ಯಕ್ರಮ ನಿರ್ವಾಹಕ ಡಾ.ರಾಜೇಂದ್ರ ಹೆಗಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ರೇಣುಕಾ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಕೊಡಿರಂಗಪ್ಪ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಯಶ್ವಂತ್ ಕುಮಾರ್, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಜುಂಜಣ್ಣ, ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕ ಬಿ.ಎನ್.ನರೇಶ್ ಬಾಬು ಹಾಜರಿದ್ದರು.