19.5 C
Bengaluru
Sunday, March 1, 2026

Y ಹುಣಸೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

- Advertisement -
- Advertisement -

Y Hunasenahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ವೈ ಹುಣಸೇನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ನಾರಾಯಣಸ್ವಾಮಿ ಹಾಗೂ ಉಪಾಧ್ಯಕ್ಷರಾಗಿ ಜಯಮ್ಮ ಆಯ್ಕೆಯಾಗಿದ್ದಾರೆ.

ಒಟ್ಟು 17 ಸದಸ್ಯ ಬಲ ಹೊಂದಿರುವ ವೈ ಹುಣಸೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲು ನಿಗದಿಪಡಿಸಲಾಗಿದ್ದು ಶನಿವಾರ ಚುನಾವಣೆ ಪ್ರಕ್ರಿಯೆ ನಡೆಯಿತು.

ಅಧ್ಯಕ್ಷಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ನಾರಾಯಣಸ್ವಾಮಿ ಮತ್ತು ಕಾಂಗ್ರೆಸ್ ಬೆಂಬಲಿತ ಮುರಳಿ.ಜಿ.ಎ, ನಾಮಪತ್ರ ಸಲ್ಲಿಸಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಜಯಮ್ಮ ಮತ್ತು ಕಾಂಗ್ರೆಸ್ ಬೆಂಬಲಿತ ವೆಂಕಟಲಕ್ಷ್ಮಮ್ಮ ನಾಮಪತ್ರ ಸಲ್ಲಿಸಿದ್ದರು.

ಅಧ್ಯಕ್ಷ ಸ್ಥಾನದ ಜೆಡಿಎಸ್ ಬೆಂಬಲಿತ ನಾರಾಯಣಸ್ವಾಮಿ 9 ಮತಗಳನ್ನು ಪಡೆದರೆ ಕಾಂಗ್ರೆಸ್ ಬೆಂಬಲಿತ ಮುರಳಿ.ಜಿ.ಎ, 8 ಮತಗಳನ್ನು ಪಡೆದು ಪರಾಭವಗೊಂಡರು. ಉಪಾಧ್ಯಕ್ಷ ಸ್ಥಾನದ ಜೆಡಿಎಸ್ ಬೆಂಬಲಿತ ಜಯಮ್ಮ 9 ಮತಗಳನ್ನು ಪಡೆದರೆ ಕಾಂಗ್ರೆಸ್ ಬೆಂಬಲಿತ ವೆಂಕಟಲಕ್ಷ್ಮಮ್ಮ 8 ಮತಗಳನ್ನು ಪಡೆಯುವ ಮೂಲಕ ಪರಾಭವಗೊಂಡರು.

ಜೆಡಿಎಸ್ ಬೆಂಬಲಿತ ನಾರಾಯಣಸ್ವಾಮಿ ರನ್ನು ಅಧ್ಯಕ್ಷರಾಗಿ ಹಾಗೂ ಜಯಮ್ಮ ರನ್ನು ಉಪಾಧ್ಯಕ್ಷರನ್ನಾಗಿ ಚುನಾವಣಾಧಿಕಾರಿ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಮಂಜುಳ ಘೋಷಿಸಿದರು.

ಮುಖಂಡರಾದ ಬೂಸಾ ನಾರಾಯಣಸ್ವಾಮಿ, ಎಚ್.ವಿ.ದೇವರಾಜ್, ಮುದ್ದುಕೃಷ್ಣ, ಶಿವಕುಮಾರ್, ಬೇಕರಿ ನರಸಿಂಹಗೌಡ, ಗ್ರಾ.ಪಂ ಸದಸ್ಯರಾದ ರಾಜಪ್ಪ, ರವಿಕುಮಾರ್ ಹಾಜರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!