Chikkaballapur : ಚಿಕ್ಕಬಳ್ಳಾಪುರ ತಾಲ್ಲೂಕಿನ ದೊಡ್ಡಮರಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಲುವಳ್ಳಿ (Yaluvahalli) ಗ್ರಾಮದ ಉಪಚುನಾವಣೆಯಲ್ಲಿ BJP ಮತ್ತು JDS ಬೆಂಬಲಿತ NDA ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಮೃತ್ ಕುಮಾರ್ ಗೆಲುವು (Win) ಸಾಧಿಸಿದ್ದಾರೆ.
ಕಾಂಗ್ರೆಸ್ ಬೆಂಬಲಿತ ನಂದಕುಮಾರ್ ವಿರುದ್ಧ 3 ಮತಗಳ ಅಂತರದಿಂದ ಜಯಗಳಿಸಿದ ಅಮೃತ್ ಕುಮಾರ್ ಅವರು ಯಲುವಳ್ಳಿ ಗ್ರಾಮದ ಅಭಿವೃದ್ಧಿಗೆ ಸಂಪೂರ್ಣ ಶ್ರಮಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೇಶವರೆಡ್ಡಿ, ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಕೆ.ಆರ್.ರೆಡ್ಡಿ, ಯಲುವಳ್ಳಿ ಗ್ರಾಮದ ಮುಖಂಡರು ಹಾಗೂ ಅನೇಕ ಪದಾಧಿಕಾರಿಗಳು ಉಪಸ್ಥಿತರಿದ್ದರು.