Gudibande : ಗುಡಿಬಂಡೆ ತಾಲ್ಲೂಕಿನ ಎಲ್ಲೋಡು ಆದಿನಾರಾಯಣ (Yellodu Sri Lakshmi Aadinarayana Swami Gudi) ಜಾತ್ರಾ ಮಹೋತ್ಸವವು (Jathre) ಭಾನುವಾರ ಅದ್ದೂರಿಯಾಗಿ ನಡೆಯಿತು. ಮಾಘಮಾಸದಲ್ಲಿ ಪ್ರತಿವರ್ಷ 10 ದಿನ ನಡೆಯುವ ಜಾತ್ರಾ ಮಹೋತ್ಸವಕ್ಕೆ ಜಿಲ್ಲೆ, ರಾಜ್ಯ ಹಾಗೂ ಹೊರರಾಜ್ಯಗಳ ಮೂಲೆ ಮೂಲೆಗಳಿಂದ ಸಾವಿರಾರು ಭಕ್ತರು ಬಂದು ದೇವರ ಪೂಜೆ, ಹರಕೆ ಸಲ್ಲಿಸುತ್ತಾರೆ.
ಭರತ ಹುಣ್ಣಿಮೆಯ ದಿನ ನಡೆದ ರಥೋತ್ಸವಕ್ಕೆ ತಹಶೀಲ್ದಾರ್ ಮನಿಷಾ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ರಥೋತ್ಸವದ ವೈಭವವನ್ನು ಕಣ್ತುಂಬಿಕೊಂಡ ಸಾವಿರಾರು ಭಕ್ತರು, ರಥಕ್ಕೆ ಬಾಳೆಹಣ್ಣು ಮತ್ತು ದವಳ ಸಲ್ಲಿಸಿದರು.
ಈ ಬೆಟ್ಟವು ಸಂಪೂರ್ಣವಾಗಿ ಆಮೆಯ ಆಕಾರದಲ್ಲಿ ಇರುವುದರಿಂದ ಇದಕ್ಕೆ ಕೂರ್ಮಗಿರಿ ಎಂಬ ಹೆಸರು ಬಂದಿದ್ದು ಲಕ್ಷ್ಮಿ ಆದಿನಾರಾಯಣಸ್ವಾಮಿ ರಾಜ್ಯದಲ್ಲಿರುವ ಪ್ರಮುಖ ಪುಣ್ಯಕ್ಷೇತ್ರಗಳಲ್ಲಿ ಒಂದಾಗಿದೆ.