Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ‘ಯುವನಿಧಿ’ (Yuvanidhi) ಯೋಜನೆ ಕುರಿತ ಕರಪತ್ರ ಮತ್ತು ಭಿತ್ತಿಪತ್ರಗಳನ್ನು (Poster Release) ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ (Dr MC Sudhakar) ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಸಚಿವರು “ಡಿಸೆಂಬರ್ 26ರಿಂದ ಯುವನಿಧಿ ಯೋಜನೆಯಡಿ ನೋಂದಣಿಗೆ ಚಾಲನೆ ದೊರೆತಿದ್ದು ಜನವರಿ 8ರ ವರೆಗೆ ಜಿಲ್ಲೆಯಲ್ಲಿ 1035 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ 52 ಕಾಲೇಜುಗಳಿದ್ದು ಪ್ರಸ್ತುತ 6,300ಕ್ಕೂ ಹೆಚ್ಚು ಅಭ್ಯರ್ಥಿಗಳು ಯೋಜನೆಗೆ ಅರ್ಹರಿದ್ದಾರೆ. ಜನವರಿ 12ರ ಸ್ವಾಮಿ ವಿವೇಕಾನಂದ ಜಯಂತಿ ದಿನ ಶಿವಮೊಗ್ಗದಲ್ಲಿ ‘ಯುವ ಸಮಾವೇಶ’ದ ಹೆಸರಿನಲ್ಲಿ ಕಾರ್ಯಕ್ರಮ ನಡೆಯಲಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಭಾಗಿ ಆಗಲಿದ್ದಾರೆ. ಅಂದೇ ಡಿಬಿಟಿ ಮೂಲಕ ನಿರುದ್ಯೋಗ ಭತ್ಯೆ ಜಮೆ ಆಗಲಿದೆ” ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ಮಹೇಶ್ ಕುಮಾರ್, ಉದ್ಯೋಗಾಧಿಕಾರಿ ಎಂ.ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಜುಂಜಣ್ಣ, ವಾರ್ತಾ ಸಹಾಯಕ ಎಂ.ಆರ್.ಮಂಜುನಾಥ್, ಜಿಲ್ಲಾ ಅಭಿಯಾನ ವ್ಯವಸ್ಥಾಪಕ ವೆಂಕಟಾಚಲಪತಿ ಪಾಲ್ಗೊಂಡಿದ್ದರು.